ಧಾರವಾಡದ ಪ್ರತಿಷ್ಠಿತ ಕರ್ನಾಟಕ ಕೃಷಿ ವಿಶ್ವವಿದ್ಯಾಲಯದ 35 ನೇ ಘಟಿಕೋತ್ಸವ ಇಂದು ನಡೆಯಿತು. ವಿಶ್ವವಿದ್ಯಾಲಯದ ಕುಲಾಧಿಪತಿಯೂ ಆದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಈ ಘಟಿಕೋತ್ಸವದಲ್ಲಿ ಪಾಲ್ಗೊಂಡಿದ್ದರು. ಸಹ ಕುಲಾಧಿಪತಿ ಹಾಗೂ ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಘಟಿಕೋತ್ಸವದಲ್ಲಿ ಪಾಲ್ಗೊಂಡು ವಿವಿಧ ವಿಷಯಗಳಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು.
595 ಜನರಿಗೆ ಪದವಿ, 263 ಸ್ನಾತಕೋತ್ತರ ಪದವಿ, 42 ಪಿಎಚ್‌ಡಿ ಸೇರಿದಂತೆ 890 ಜನರಿಗೆ ಪದವಿ ಪ್ರದಾನ ಮಾಡಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಾತನಾಡಿ, ಧಾರವಾಡದ ಕೃಷಿ ವಿಶ್ವವಿದ್ಯಾಲಯ ಸಾಕಷ್ಟು ಖ್ಯಾತಿ ಪಡೆದಿದೆ. ಪದವಿ ಪಡೆದ ವಿದ್ಯಾರ್ಥಿಗಳು ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಬೇಕಿದೆ. ಈ ದೇಶವನ್ನು ಆತ್ಮ ನಿರ್ಭರ ಮಾಡಲು ಕೃಷಿ ವಿದ್ಯಾರ್ಥಿಗಳು ಪಣ ತೊಡಬೇಕಿದೆ ಎಂದರು.
ಈ ವರ್ಷ ಪಿ.ಆನಂದಕುಮಾರ ಎಂಬ ವಿದ್ಯಾರ್ಥಿ ಅತೀ ಹೆಚ್ಚು ಚಿನ್ನದ ಪದಕ ಪಡೆದ ವಿದ್ಯಾರ್ಥಿಯಾಗಿ ಹೊರಹೊಮ್ಮಿದನು. ಪ್ರತಿವರ್ಷ ಪದವಿ ಪಡೆಯುವ ವಿದ್ಯಾರ್ಥಿಗಳು ಹಾಗೂ ಅತಿಥಿಗಳು ಗೌನ್ ಧರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದರು. ಆದರೆ, ಈ ವರ್ಷ ಎಲ್ಲಾ ವಿದ್ಯಾರ್ಥಿಗಳು ಹಾಗೂ ಅತಿಥಿಗಳು ಬಿಳಿ ಬಣ್ಣದ ಉಡುಪು ತೊಟ್ಟು ಕೃಷಿ ವಿವಿಯ ಶಾಲು ಹಾಕಿಕೊಂಡು ಗಮನಸೆಳೆದರು.
Kshetra Samachara
07/06/2022 05:00 pm