ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಸಚಿವ ಮುನೇನಕೊಪ್ಪ ಅವರಿಂದ 48.00 ಲಕ್ಷ ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ಮತ್ತು ಸನ್ಮಾನ

ನವಲಗುಂದ : ತಾಲೂಕಿನ ತಲೆಮೊರಬ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಡಿಯಲ್ಲಿ ಅಂದಾಜು ಮೊತ್ತ 48.00 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ನೂತನ 04 ಕೊಠಡಿಗಳ ನಿರ್ಮಾಣಕ್ಕೆ ಜವಳಿ ಮತ್ತು ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಅವರು ಭೂಮಿಪೂಜೆ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು.

ಇದೇ ವೇಳೆ ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಹಾಗೂ ಶಾಲಾ ಆಡಳಿತ ಮಂಡಳಿ ಸದಸ್ಯರಿಂದ ಸಚಿವರಿಗೆ ಸನ್ಮಾನಿಸಲಾಯಿತು. ನಂತರ ಕೊರೋನಾ ಸಂಕಷ್ಟದ ಸಮಯದಲ್ಲಿ ಜನರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಇಲಾಖೆಯ ಸಿಬ್ಬಂದಿಯವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು.

Edited By : PublicNext Desk
Kshetra Samachara

Kshetra Samachara

21/08/2021 08:26 am

Cinque Terre

91.33 K

Cinque Terre

1

ಸಂಬಂಧಿತ ಸುದ್ದಿ