ನವಲಗುಂದ: ವಿವಿಧ ವೇಷಭೂಷಣಗಳೊಂದಿಗೆ ಹತ್ತಾರು ವಿದ್ಯಾರ್ಥಿಗಳು ಬುಧವಾರ ನವಲಗುಂದ ಪಟ್ಟಣದ ಡಾ. ಬಿ ಆರ್ ಅಂಬೇಡ್ಕರ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂಬರ್-7ರಲ್ಲಿ ಆಯೋಜಿಸಲಾಗಿದ್ದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸಂಭ್ರಮದಲ್ಲಿ ಭಾಗಿಯಾಗಿ ಸಂಭ್ರಮಿಸಿದರು.
ಧಾರವಾಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಂಸ್ಕೃತಿಕ ಇಲಾಖೆ, ನವಲಗುಂದದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ, ಸಮೂಹ ಸಂಪನ್ಮೂಲ ಕೇಂದ್ರ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂಬರ್ - 7 ಸಂಯೋಗದಲ್ಲಿ ನವಲಗುಂದ - 1 ಸಮೂಹ ಸಂಪನ್ಮೂಲ ಕೇಂದ್ರ ವ್ಯಾಪ್ತಿಯ ಶಾಲಾ/ಕಾಲೇಜುಗಳಲ್ಲಿ 2022 23ರ ಪ್ರತಿಭಾ ಕಾರಂಜಿ / ಕಲೋತ್ಸವ ಕಾರ್ಯಕ್ರಮವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು.
Kshetra Samachara
21/09/2022 06:54 pm