ಪ್ರಾರ್ಥನಾ ಎಜುಕೇಶನ್ ಸೊಸೈಟಿಯ ಮಾರ್ಗದರ್ಶನದಲ್ಲಿ ಕೆ.ಎಚ್ ಪಾಟೀಲ್ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪಾಲಕರಿಗೆ 'Induction Program'ಅನ್ನು ಹಮ್ಮಿಕೊಂಡಿದ್ದರು.
ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ನೆಹರೂ ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥ ಡಾ. ಎಸ್.ಎಂ ಚಿಲ್ಲೂರ ಅವರು ವಿದ್ಯಾರ್ಥಿಗಳ ಯಶಸ್ಸಿಗೆ ಪಾಲಕರ ಪ್ರೋತ್ಸಾಹ ತುಂಬಾ ಮುಖ್ಯವಾದದ್ದು ಎಂದರು.
ವೇಮನ ವಿದ್ಯಾವರ್ಧಕ ಸಂಘದ ಗೌರವ ಕಾರ್ಯದರ್ಶಿ ಆರ್. ಕೆ. ಪಾಟೀಲ್ ಅವರು ಮಾತನಾಡಿ, ಪಾಲಕರು ತಮ್ಮ ಮಕ್ಕಳ ಮೇಲೆ ಅತಿಯಾದ ಒತ್ತಡ ಹೇರದೆ, ಅವರಿಗೆ ಮಾದರಿಯಾಗುವಂತೆ ಮಕ್ಕಳ ಸಮ್ಮುಖದಲ್ಲಿ ನಡೆದುಕೊಂಡು ಹೋಗಬೇಕು. ಅಷ್ಟೇ ಅಲ್ಲದೆ ಉತ್ತಮ ಶಿಕ್ಷಣಕ್ಕೆ ಸಹಕಾರಿಯಾಗಬೇಕು ಎಂದರು.
ಈ ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಎಸ್.ಬಿ ಸಣ್ಣಗೌಡರ, ವಿಜ್ಞಾನ ವಿಭಾಗದ ಸಹ ಸಂಯೋಜಕ ಡಾ ಶಿವರಾಮ ಪಾಟೀಲ್, ಶಂಕರ ಕಂಬಾರ, ಶಿಕ್ಷಕರು ಮುಂತಾದವರು ಉಪಸ್ಥಿತರಿದ್ದರು.
Kshetra Samachara
11/06/2022 12:54 pm