ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : “ಹೊಸ ಶಿಕ್ಷಣ ನೀತಿ” ಕಾರ್ಯಗಾರದಲ್ಲಿ ಸಚಿವ ಮುನೇನಕೊಪ್ಪ ಅವರಿಗೆ ಸನ್ಮಾನ

ನವಲಗುಂದ : ನವಲಗುಂದ ನಗರದ ಶ್ರೀ ಹುರಕಡ್ಲಿ ಅಜ್ಜನವರ ಕಲ್ಯಾಣ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ, ನವಲಗುಂದ ಹಾಗೂ ಕರ್ನಾಟಕ ರಾಜ್ಯ ಸರಕಾರಿ ಪ್ರೌಢಶಾಲಾ ಬಡ್ತಿ ಮುಖ್ಯ ಶಿಕ್ಷಕರ ಸಂಘ ಜಿಲ್ಲಾ ಘಟಕ ಧಾರವಾಡ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ “ಹೊಸ ಶಿಕ್ಷಣ ನೀತಿ” ಕುರಿತು ಒಂದು ದಿನದ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಜವಳಿ ಮತ್ತು ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಪಾಲ್ಗೊಂಡಿದ್ದರು.

ಈ ವೇಳೆ ಸಚಿವರಿಗೆ ಶಿಕ್ಷಕರ ಸಂಘದ ಪದಾಧಿಕಾರಿಗಳಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಿ ಎಸ್ ಮಯಾಚಾರ್ಯ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಎ ಬಿ ಕೊಪ್ಪದ, ವಾಯ್ ಹೆಚ್ ಬಣವಿ, ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹಶಿಕ್ಷಕರ ಸಂಘ ಹಾಗೂ ಧಾರವಾಡ ಜಿಲ್ಲಾ ಬಡ್ತಿ ಮುಖ್ಯಾಧ್ಯಾಪಕರ ಸಂಘದ ವಿವಿಧ ಪದಾಧಿಕಾರಿಗಳು ಹಾಗೂ ಶಿಕ್ಷಕ ಶಿಕ್ಷಕಿಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

16/08/2021 09:36 pm

Cinque Terre

11.36 K

Cinque Terre

0

ಸಂಬಂಧಿತ ಸುದ್ದಿ