ನವಲಗುಂದ: ಪಟ್ಟಣದ ಶ್ರೀ ಹುರಕಡ್ಲಿ ಅಜ್ಜನವರ ಸಾಂಸ್ಕೃತಿಕ ಭವನದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿಯ ಅಂಗವಾಗಿ ಜರುಗಿದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಶಿಕ್ಷಕರ ದಿನೋತ್ಸವ ಕಾರ್ಯಕ್ರಮ ಹಾಗೂ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಜಿಲ್ಲೆಯ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕೈಮಗ್ಗ ಮತ್ತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಶಂಕರ ಪಾಟೀಲ್ ಮುನೇನಕೋಪ್ಪ ಸೇರಿದಂತೆ ಪಟ್ಟಣದ ಗುರು-ಹಿರಿಯರು, ವಿವಿಧ ಜನಪ್ರತಿನಿಧಿಗಳು, ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಶಿಕ್ಷಕರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
Kshetra Samachara
05/09/2021 09:37 pm