ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಾ.ಸೋಮಶೇಖರ ಇಮ್ರಾಪುರ ಅವರಿಗೆ ಬೇಂದ್ರೆ ಪ್ರಶಸ್ತಿ

ಧಾರವಾಡ: ಧಾರವಾಡದ ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಪ್ರತಿವರ್ಷ ಕೊಡಮಾಡುವ ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಪ್ರಶಸ್ತಿಗೆ ಹಿರಿಯ ಕವಿ ಡಾ.ಸೋಮಶೇಖರ ಇಮ್ರಾಪುರ ಭಾಜನರಾಗಿದ್ದಾರೆ.

ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಟ್ರಸ್ಟ್ ಅಧ್ಯಕ್ಷ ಡಾ.ಡಿ.ಎಂ.ಹಿರೇಮಠ, ಈ ಪ್ರಶಸ್ತಿಗೆ ಆಯ್ಕೆ ಸಮಿತಿ ರಚನೆ ಮಾಡಲಾಗಿತ್ತು. ಆಯ್ಕೆ ಸಮಿತಿಯು ಮುಚ್ಚಿದ ಲಕೋಟೆಯಲ್ಲಿ ಕೆಲ ಸಾಹಿತಿಗಳ ಹಾಗೂ ಕವಿಗಳ ಹೆಸರನ್ನು ಉಲ್ಲೇಖ ಮಾಡಿತ್ತು. ಅದರಲ್ಲಿ ಡಾ.ಸೋಮಶೇಖರ ಇಮ್ರಾಪುರ ಅವರಿಗೆ ಪ್ರಸಕ್ತ ವರ್ಷದ ಪ್ರಶಸ್ತಿ ನೀಡಬಹುದು ಎಂದು ತಿಳಿಸಿದೆ ಎಂದರು.

ಜ.31 ರಂದು ಧಾರವಾಡದ ಬೇಂದ್ರೆ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. ಪ್ರಶಸ್ತಿ 1 ಲಕ್ಷ ರೂಪಾಯಿ ನಗದು ಪುರಸ್ಕಾರವನ್ನೊಳಗೊಂಡಿದೆ ಎಂದರು.

Edited By : Manjunath H D
Kshetra Samachara

Kshetra Samachara

19/01/2022 01:42 pm

Cinque Terre

24.27 K

Cinque Terre

1

ಸಂಬಂಧಿತ ಸುದ್ದಿ