ಧಾರವಾಡ: ನಗರದ ಶ್ರೀ ಸಾಯಿ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಹಾಗೂ ಗಣೇಶ ಹಬ್ಬದ ಪ್ರಯುಕ್ತ "ಪ್ರತಿಭಾ ಕಿರಣ" ವಿದ್ಯಾರ್ಥಿಗಳ ಪ್ರತಿಭಾ ಅನಾವರಣ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲೆ, ನಿಬಂಧ ಸ್ಪರ್ಧೆ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಸಾಯಿ ಪದವಿಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ಹೊಂಬೆಳಕು ಪ್ರತಿಷ್ಠಾನ, ಸಂಕಲ್ಪ ಯುವ ವೇದಿಕೆ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಡಾ.ವೀಣಾ ಬಿರಾದರ್ ನೆರವೇರಿಸಿದರು. ಅಧ್ಯಕ್ಷತೆಯನ್ನು ಯರಿಕೊಪ್ಪ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಎಸ್ ವಿ ತಟವಟ್ಟಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಯರಿಕೊಪ್ಪ ಗ್ರಾಮದ ಎಸ್ ಡಿಎಂಸಿ ಸರ್ಕಾರಿ ಪ್ರೌಢಶಾಲೆಯ ಉಪಾಧ್ಯಕ್ಷರಾದ ಶಂಕರ ಅಮೀನಭಾವಿ ಹಾಗೂ ಪುಲ್ಲಯ್ಯ ಚಂಚಕೋಲ ಆಗಮಿಸಿದ್ದರು. ಈ ವೇಳೆ ಮಹಾವಿದ್ಯಾಲಯದ ಸಿಬ್ಬಂದಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
Kshetra Samachara
14/09/2022 07:18 pm