ನವಲಗುಂದ: ತಾಲೂಕಿನ ಮೊರಬ ಗ್ರಾಮದಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ ಗುಣಮಟ್ಟದ ಹೆಸರುಕಾಳು ಹಾಗೂ ಉದ್ದಿನಕಾಳು ಖರೀದಿ ಕೇಂದ್ರವನ್ನು ಕೈಮಗ್ಗ ಮತ್ತು ಸಕ್ಕರೆ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮದ ಗುರು-ಹಿರಿಯರು, ಎ.ಪಿ.ಎಂ.ಸಿ.ಅಧ್ಯಕ್ಷರಾದ ಯಲ್ಲಪ್ಪ ಅಕ್ಕಿ, ಮುಖಂಡರಾದ ಎಸ್.ಬಿ.ದಾನಪ್ಪಗೌಡರ, ಗುರುನಾಥ ಉಳ್ಳಾಗಡ್ಡಿ, ಮಂಜು ಕಾಲವಾಡ ಸೇರಿದಂತೆ ಅನೇಕ ಮುಖಂಡರು, ರೈತರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
30/08/2021 07:30 pm