ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಗಾಂಧಿ ಜಯಂತಿ ನಿಮಿತ್ತ ಭಾವಚಿತ್ರಕ್ಕೆ ಗೌರವ ನಮನ

ನವಲಗುಂದ : 153ನೇ ಗಾಂಧಿ ಜಯಂತಿಯನ್ನು ದೇಶಾದ್ಯಂತ ಇಂದು ಆಚರಿಸಲಾಗುತ್ತಿದ್ದು, ಪ್ರತಿ ವರ್ಷ ಅಕ್ಟೋಬರ್ 2 ರಂದು ಮಹಾತ್ಮ ಗಾಂಧಿ ಎಂದು ಕರೆಯಲಾಗುವ ಮೋಹನ್ ದಾಸ್ ಕರಮಚಂದ್ ಗಾಂಧಿಯವರ ಜನ್ಮದಿನದಂದು ಆಚರಿಸಲಾಗುತ್ತದೆ. ದೇಶದ ಒಳಿತಿಗಾಗಿ ತನ್ನ ಪ್ರಾಣವನ್ನೇ ಅರ್ಪಿಸಿದ ಈ ಮಹಾನ್ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ.

ಈ ಪ್ರಯುಕ್ತ ಇಂದು ನವಲಗುಂದ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಗಾಂಧಿ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರೊ ರಾಘವೇಂದ್ರ ಉಮಚಗಿಯವರು ಮಾತನಾಡಿ, ಆಧುನಿಕ ಭಾರತದಲ್ಲಿ ಗಾಂಧೀಜಿಯವರ ಚಿಂತನೆಗಳನ್ನು ಅಳವಡಿಸಿಕೊಳ್ಳುವದು ಅತೀ ಅವಶ್ಯವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ ಎಂ. ಬಿ. ಬಾಗಡಿಯವರು ಮಾತನಾಡಿ, ಮಹಾತ್ಮ ಗಾಂಧೀಜಿಯವರ ಆದರ್ಶಗಳು, ವಿಚಾರಗಳು ಇಂದಿಗೂ ಪ್ರಸ್ತುತವಾಗಿದೆ ಎಂದರು.

ಈ ಸಂದರ್ಭದಲ್ಲಿ ಪ್ರೊ ರವಿ ಬ್ಯಾಹಟ್ಟಿ, ಪ್ರೊ ಮಹಾನಂದಾ ಹಿರೇಮಠ್, ಪ್ರತಿಭಾ ನಿಡಗುಂದಿ ಹಾಗೂ ಇನ್ನಿತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

02/10/2022 12:18 pm

Cinque Terre

12.91 K

Cinque Terre

0

ಸಂಬಂಧಿತ ಸುದ್ದಿ