ನವಲಗುಂದ: ತಾಲೂಕಿನ ಆಯೆಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾದ ಕೊಠಡಿಯನ್ನು ಸಕ್ಕರೆ ಹಾಗೂ ಜವಳಿ ಖಾತೆ ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ಉದ್ಘಾಟಿಸಿ, ಶಾಲಾ ಮಕ್ಕಳಿಗೆ ಆಹಾರ ಧಾನ್ಯಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ನಗರದ ಗುರು-ಹಿರಿಯರು, ಶಿಕ್ಷಕರು, ವಿವಿಧ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
Kshetra Samachara
12/09/2021 12:16 am