ನವಲಗುಂದ: 'ಜಲಜೀವನ್ ಮಿಷನ್' ಯೋಜನೆಯಡಿ ತಾಲೂಕಿನ ಆಯೆಟ್ಟಿ ಗ್ರಾಮದಲ್ಲಿ ಅಂದಾಜು ಮೊತ್ತ 92 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಕುಡಿಯುವ ನೀರಿನ ಪೈಪಲೈನ್ ಅಳವಡಿಸುವುದು ಮತ್ತು ಮನೆಗಳಿಗೆ ನಳಗಳ ಜೋಡಣೆ ಕಲ್ಪಿಸುವ ಕಾಮಗಾರಿಗೆ ಸಕ್ಕರೆ ಹಾಗೂ ಜವಳಿ ಖಾತೆ ಉಸ್ತುವಾರಿ ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಗುರು-ಹಿರಿಯರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ವಿವಿಧ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
Kshetra Samachara
12/09/2021 12:19 am