ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ವಿವಿಧ ಕಾಮಗಾರಿಗಳಿಗೆ ಚಾಲನೆ ಮತ್ತು ಸನ್ಮಾನ

ನವಲಗುಂದ : ತಾಲ್ಲೂಕಿನ ಗೊಬ್ಬರಗುಂಪಿ ಗ್ರಾಮದಲ್ಲಿನ ಪಂಚಾಯತಿಯ ನೂತನ ಕಟ್ಟಡ ಉದ್ಘಾಟನೆ ಹಾಗೂ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಬಾರ್ಡ್ ಯೋಜನೆಯಡಿಯಲ್ಲಿ ನೂತನವಾಗಿ ನಿರ್ಮಿಸಲಾದ ಮೂರು ಕೊಠಡಿಗಳ ಉದ್ಘಾಟನೆಯನ್ನು ಮಂಗಳವಾರ ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಮಾಡಿದರು.

ಇನ್ನು ಇದೆ ಸಂಧರ್ಭದಲ್ಲಿ ಗೊಬ್ಬರಗುಂಪಿ ಗ್ರಾಮದಲ್ಲಿ ಕೊರೋನಾ ಸಂಕಷ್ಟದ ಸಮಯದಲ್ಲಿ ಜನರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಇಲಾಖೆಯ ಸಿಬ್ಬಂದಿಯವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಹಾಗೂ ಕಳಸಾ-ಬಂಡೂರಿ ಹೋರಾಟಗಾರರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮದ ಗುರು-ಹಿರಿಯರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಅನೇಕ ಮುಖಂಡರು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

25/01/2022 06:04 pm

Cinque Terre

3.66 K

Cinque Terre

0

ಸಂಬಂಧಿತ ಸುದ್ದಿ