ನವಲಗುಂದ : “ಜಲ ಜೀವನ್ ಮಿಷನ್” ಯೋಜನೆಯಲ್ಲಿ ದೇಶದ ಪ್ರತಿ ಮನೆಗೂ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ ಅಡಿಯಲ್ಲಿ ಮಂಗಳವಾರ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದಲ್ಲಿ ಅಂದಾಜು ಮೊತ್ತ 247 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಕುಡಿಯುವ ನೀರಿನ ಪೈಪಲೈನ್ ಅಳವಡಿಸುವುದು ಮತ್ತು ಮನೆಗಳಿಗೆ ನಳಗಳ ಜೋಡಣೆ ಕಲ್ಪಿಸುವ ಕಾಮಗಾರಿಗೆ ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಗುರು-ಹಿರಿಯರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಅನೇಕ ಮುಖಂಡರು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
25/01/2022 06:13 pm