ನವಲಗುಂದ : ಮಂಗಳವಾರ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ಅಂದಾಜು 4.99 ಲಕ್ಷಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಬಸ್ ನಿಲ್ದಾಣದ ಉದ್ಘಾಟನೆಯನ್ನು ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ನೆರವೇರಿಸಿದರು.
ಇನ್ನು ಗ್ರಾಮದಲ್ಲಿ ನೂತನ ರಾಜೀವ್ ಗಾಂಧಿ ಸೇವಾ ಕೇಂದ್ರದ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿ, ಕೊರೋನಾ ಸಂಕಷ್ಟದ ಸಮಯದಲ್ಲಿ ಜನರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಇಲಾಖೆಯ ಸಿಬ್ಬಂದಿಯವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರನ್ನು ಇಂದು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮದ ಗುರು-ಹಿರಿಯರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ವಿವಿಧ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
Kshetra Samachara
25/01/2022 06:26 pm