ನವಲಗುಂದ: ತಾಲೂಕಿನ ಶಾನವಾಡ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾದ ಒಂದು ಕೊಠಡಿ ಹಾಗೂ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಅಂಗನವಾಡಿ ಕೇಂದ್ರವನ್ನು ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಮಂಗಳವಾರ ಉದ್ಘಾಟಿಸಿದರು.
ಶಾನವಾಡ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕೊರೊನಾ ಸಂಕಷ್ಟದ ಸಮಯದಲ್ಲಿ ಜನರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಇಲಾಖೆಯ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮದ ಗುರು-ಹಿರಿಯರು, ಶಿಕ್ಷಕರು, ಅಧಿಕಾರಿಗಳು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.
Kshetra Samachara
01/02/2022 08:38 pm