ನವಲಗುಂದ: ತಾಲೂಕಿನ ಶಾನವಾಡ ಗ್ರಾಮದಲ್ಲಿ ಅಂದಾಜು ಮೊತ್ತ 99 ಲಕ್ಷ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಕುಡಿಯುವ ನೀರಿನ ಪೈಪಲೈನ್ ಅಳವಡಿಸುವುದು ಮತ್ತು ಮನೆಗಳಿಗೆ ನಳಗಳ ಜೋಡಣೆ ಕಲ್ಪಿಸುವ ಕಾಮಗಾರಿಗೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಇಂದು ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಗುರು-ಹಿರಿಯರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಅನೇಕ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
01/02/2022 08:44 pm