ನವಲಗುಂದ: ತಾಲೂಕಿನ ಹಾಳಕುಸುಗಲ್ಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಮತ್ತು ಘನತಾಜ್ಯ ವಿಲೇವಾರಿ ಘಟಕದ ನಿರ್ಮಾಣ ಕಾಮಗಾರಿಗೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಇದೇ ವೇಳೆ ಕೊರೊನಾ ಸಂಕಷ್ಟದ ಸಮಯದಲ್ಲಿ ಜನರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಇಲಾಖೆಯ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಗ್ರಾಮ ಗುರು-ಹಿರಿಯರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಶಿಕ್ಷಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
01/02/2022 09:52 pm