ನವಲಗುಂದ : ಸರ್ಕಾರದ ಮಹತ್ತರ ಯೋಜನೆಯಾದ ವಿಶೇಷವಾಗಿ ಗ್ರಾಮೀಣ ಭಾಗದ ಜನರ ಸಂಕಷ್ಟಗಳಿಗೆ ಸ್ಪಂದಿಸುವ ತಹಶೀಲ್ದಾರ್ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ತಹಶೀಲ್ದಾರ್ ಗ್ರಾಮ ವಾಸ್ತವ್ಯ ಪ್ರತಿ ತಿಂಗಳ ಮೂರನೇ ಶನಿವಾರ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಈ ಬಾರಿ ತಾಲ್ಲೂಕಿನ ಖನ್ನೂರ ಗ್ರಾಮದಲ್ಲಿ ಯಶಸ್ವಿಯಾಗಿ ಜರುಗಿತು.
ಇನ್ನು ನವಲಗುಂದ ತಹಶೀಲ್ದಾರ ಪ್ರವೀಣ ಹುಚ್ಚನ್ನವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ವಿವಿಧ ಸರ್ಕಾರಿ ಯೋಜನೆಗಳ ಮಾಹಿತಿ ಹಾಗೂ ಇಲ್ಲಿಯವರೆಗೆ ಆಯಾ ಗ್ರಾಮ ವಾಸ್ತವ್ಯದ, ಗ್ರಾಮ ವ್ಯಾಪ್ತಿಯ ಸಾರ್ವಜನಿಕರು ಸಲ್ಲಿಸಿರುವ ಮನವಿ, ಕುಂದು ಕೊರತೆಗಳ ಕುರಿತು ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.
Kshetra Samachara
19/02/2022 04:16 pm