ನವಲಗುಂದ: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿಂದುಳಿದ ವರ್ಗಗಳ ಧೀಮಂತ ನಾಯಕ, ಪರಿವರ್ತನೆಯ ಹರಿಕಾರ ಶ್ರೀ ಡಿ.ದೇವರಾಜ ಅರಸು ರವರ 107ನೇ ಜನ್ಮ ದಿನಾಚರಣೆಯನ್ನು ತಾಲ್ಲೂಕು ಆಡಳಿತದ ವತಿಯಿಂದ ನವಲಗುಂದ ಪಟ್ಟಣದ ಮಿನಿ ವಿಧಾನ ಸೌಧದಲ್ಲಿ ಆಚರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿದ್ದ ವಿಧ್ಯಾರ್ಥಿಗಳಿಗೆ ಪಾರಿತೋಷಕ ವಿತರಣೆ ಮಾಡಲಾಯಿತು. ನಂತರ ಇಲಾಖೆ ವತಿಯಿಂದ ಉಪಹಾರ ಮಾಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ತಹಶೀಲ್ದಾರ ಅನೀಲ ಬಡಿಗೇರ, ಕಾರ್ಯನಿರ್ವಾಹಕ ಅಧಿಕಾರಗಳು, ತಾ ಪಂ ನವಲಗುಂದ, ತಾಲೂಕು ಮಟ್ಟದ ಅಧಿಕಾರಿಗಳು, ಎಲ್ಲಾ ಪುರಸಭೆ ಸದಸ್ಯರು, ಸಮಾಜ ಕಲ್ಯಾಣ ಇಲಾಖೆ ಸಮಿತಿಯ ಎಲ್ಲಾ ಸದಸ್ಯರು ಮಾಡೆಲ್ ಹೈಸ್ಕೂಲ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Kshetra Samachara
20/08/2022 12:38 pm