ಅಳ್ನಾವರ:ಪಟ್ಟಣ ಪಂಚಾಯಿತಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.ವಾಲ್ಮೀಕಿ ಫೋಟೋ ಗೆ ಪೂಜೆ ನೆರವೇರಿಸುವ ಮೂಲಕ ಜಯಂತಿ ಆಚರಿಸಲಾಯಿತು.
ಈ ವೇಳೆ ಮಾತನಾಡಿದ ತಹಶೀಲ್ದಾರ ಅಮರೇಶ ಪಮ್ಮಾರ ಸಾಮಾಜಿಕ ಮೌಲ್ಯಗಳ ಪ್ರತಿಪಾದಕ ಮಹರ್ಷಿ ವಾಲ್ಮೀಕಿ.ಕವಿಕುಲದ ಗುರುವಾಗಿ ಹಲವಾರು ಕವಿಗಳಿಗೆ ಮತ್ತು ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆಯಾಗಿದ್ದಾರೆ.ವಾಲ್ಮೀಕಿ ರಾಮಾಯಣದ ಆಧಾರದ ಮೇಲೆ ವಿವಿಧ ಭಾಷೆಗಳಲ್ಲಿ ಕಾವ್ಯ,ನಾಟಕ,ಕಾದಂಬರಿ ಮತ್ತು ಕತೆಗಳನ್ನು ಅನೇಕರು ರಚಿಸಿದ್ದಾರೆ ಎಂದರು.
ಇದೆ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ ಕಡಕೋಳ,ಸದಸ್ಯ ಯಲ್ಲಾರಿ ಹುಬ್ಳಿಕರ್,ಎಂ,ಎಸ್,ಆಯ್,ಎಲ್ ನಿರ್ದೇಶಕ ಶಿವಾಜಿ ಡೊಳ್ಳಿನ,ಪ್ರವೀಣ್ ಪವಾರ,ಪ.ಪಂ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
Kshetra Samachara
09/10/2022 12:56 pm