ನವಲಗುಂದ : ತಾಲೂಕಿನ ಹೆಬ್ಬಾಳ ಗ್ರಾಮ ಪಂಚಾಯತ್ ವತಿಯಿಂದ ಅಕ್ಟೋಬರ 2 ಗಾಂಧಿ ಜಯಂತಿ ಪ್ರಯುಕ್ತ ಶುಕ್ರವಾರ ಗ್ರಾಮದಲ್ಲಿ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಗ್ರಾಮದ ಯುವಕ ಸಂಘದವರು, ಸ್ವಸಹಾಯ ಸಂಘಗಳ ಆಶಾ ಕಾರ್ಯಕರ್ತೆಯರು, ಗ್ರಾಮದ ಯುವ ಸಮೂಹ ಸೇರಿದಂತೆ 150 ಕ್ಕೂ ಹೆಚ್ಚು ಜನರು ಸ್ವಇಚ್ಛೆಯಿಂದ ಮುಂದೆ ಬಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
Kshetra Samachara
01/10/2021 02:20 pm