ಕಲಘಟಗಿ:ಮಹಿಳೆಯರು ವೃತ್ತಿ ಕೌಶಲ್ಯಗಳ ತರಬೇತಿಯ ಪ್ರಯೋಜನವನ್ನು ಪಡೆದುಕೊಂಡು, ಸ್ವ ಉದ್ಯೋಗ ಮಾಡ ಬೇಕು ಎಂದು ವೆಕಾಸ್ ಸಂಸ್ಥೆಯ ಮುಖ್ಯಸ್ಥೆ ದೇವಕಿ ಯೋಗಾನಂದ ಅಭಿಪ್ರಾಯ ಪಟ್ಟರು.
ಅವರು ತಾಲೂಕಿನ ದಾಸ್ತಿಕೊಪ್ಪದ ವೆಕಾಸ್ ಫೌಂಡೇಶನ್ ನಲ್ಲಿ,ಗಾಂಧಿ ಜಯಂತಿ ಹಾಗೂ ಸಂಸ್ಥೆಯಲ್ಲಿ ಹೊಲಿಗೆ ತರಬೇತಿಯನ್ನು ಪಡೆದ ಮಹಿಳೆಯರಿಗೆ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,
ಮಹಿಳೆಯರು ಸ್ವಂತ ಉದ್ಯೋಗವನ್ನು ಪ್ರಾರಂಭಿಸ ಬೇಕು,ಮಹಿಳೆಯರಿಗೆ ವಿವಿಧ ರೕಿತಿಯ ಕೌಶಲ್ಯ ತರಬೇತಿಗಳಿದ್ದು,ಅವುಗಳ ಸದುಪಯೋಗ ಪಡೆದು ಕೊಳ್ಳ ಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯಲ್ಲಿ ಹೊಲಿಗೆ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣಪತ್ರ ನೀಡಲಾಯಿತು.ಪತ್ರಕರ್ತರ ಸಂಘದ ಅಧ್ಯಕ್ಷ ರಮೇಶ ಹಾಗೂ ಪತ್ರಕರ್ತರು ಉಪಸ್ಥಿತರಿದ್ದರು.
Kshetra Samachara
02/10/2020 05:42 pm