ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಸಮಾನ ಮನಸ್ಕ ಸಂಘಟನೆ, ಸಾಮಾಜಿಕ ಕಾರ್ಯಕರ್ತರಿಂದ ದುಂಡು ಮೇಜಿನ ಸಭೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಆರೋಗ್ಯ ಕ್ಷೇತ್ರದ ಮೇಲಿನ ಗಂಭೀರ ಸಮಸ್ಯೆ ಹಿನ್ನೆಲೆಯಲ್ಲಿ ಸಮಾನ ಮನಸ್ಕ ಸಂಘಟನೆ, ಸಾಮಾಜಿಕ ಕಾರ್ಯಕರ್ತರ ದುಂಡು ಮೇಜಿನ ಸಭೆ ಇಂದು ಕೊಡಿಯಲ್ ಬೈಲ್ ನ ಸಿಬಿಇಯು ಗೋಲ್ಡನ್ ಜ್ಯುಬಿಲಿ ಹಾಲ್ ನಲ್ಲಿ ನಡೆಯಿತು.

ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಿ, ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಿ ಎಂಬ ಧ್ಯೇಯದಂತೆ ನಡೆದ ಸಭೆಯ ಅಧ್ಯಕ್ಷತೆಯನ್ನು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ವಹಿಸಿದ್ದರು.

ಹಿರಿಯ ವೈದ್ಯರಾದ ಡಾ. ಶ್ರೀನಿವಾಸ್ ಕಕ್ಕಿಲಾಯ, ಡಿಎಸ್‌ಎಸ್ ಮುಖಂಡ ಎಂ.ದೇವದಾಸ್, ಸಾಮಾಜಿಕ ಮುಖಂಡ ಎಂ.ಜಿ. ಹೆಗಡೆ, ಮಾಜಿ ಉಪಮೇಯರ್ ಮೊಹಮ್ಮದ್ ಕುಂಜತ್ ಬೈಲ್, ಪುರುಷೋತ್ತಮ ಚಿತ್ರಾಪುರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ವಿ. ಮೋಹನ್ , ಫಾರೂಕ್ ಉಳ್ಳಾಲ್, ವಕೀಲರಾದ ದಿನೇಶ್ ಹೆಗ್ಡೆ ಉಳೇಪಾಡಿ, ದಯಾನಾಥ್ ಕೋಟ್ಯಾನ್, ಯಶವಂತ ಮರೋಳಿ, ರಾಮಚಂದ್ರ ಬಬ್ಬುಕಟ್ಟೆ, ವಿಚಾರವಾದಿ ಪ್ರೊ. ನರೇಂದ್ರ ನಾಯಕ್, ಸಿಪಿಐಎಂ ಮುಖಂಡರಾದ ಜೆ. ಬಾಲಕೃಷ್ಣ ಶೆಟ್ಟಿ, ಸುನಿಲ್ ಕುಮಾರ್ ಬಜಾಲ್, ರೈತ ಮುಖಂಡ ಕೆ. ಯಾದವ ಶೆಟ್ಟಿ, ಸಿಪಿಐ ಮುಖಂಡರಾದ ಎಚ್.ವಿ. ರಾವ್, ಕರುಣಾಕರ್, ಎಐವೈಎಫ್ ಮುಖಂಡ ಸೀತರಾಮ್ ಬೇರಿಂಜೆ, ರೈತ ಮುಖಂಡ ರೋಸ್ವಾಲ್ಡ್ ಫರ್ನಾಂಡಿಸ್, ಸಮುದಾಯ ಮುಖಂಡರಾದ ವಾಸುದೇವ ಉಚ್ಚಿಲ, ಮನೋಜ್ ವಾಮಂಜೂರು, ದಲಿತ ಹಕ್ಕುಗಳ ಹೋರಾಟ ಸಮಿತಿ ಮುಖಂಡರಾದ ಕೃಷ್ಣ ತಣ್ಣೀರುಬಾವಿ, ತಿಮ್ಮಯ್ಯ ಕೊಂಚಾಡಿ, ಆಶಾ ಬೋಳೂರು, ಅಸುಂತ ಡಿಸೋಜ, ಎಸ್ ಎಫ್ ಐ ಮುಖಂಡರಾದ ಮಾಧುರಿ ಬೋಳಾರ್, ಪ್ರಮಿಳಾ ದೇವಾಡಿಗ, ಡಿವೈಎಫ್‌ಐ ಜಿಲ್ಲಾಧ್ಯಕ್ಷರಾದ ಬಿ.ಕೆ. ಇಮ್ತಿಯಾಜ್, ಅಶ್ರಫ್ ಕೆ.ಸಿ.ರೋಡ್, ನಿತಿನ್ ಕುತ್ತಾರ್, ಚರಣ್ ಶೆಟ್ಟಿ, ರಫೀಕ್ ಹರೇಕಳ ಮುಂತಾದವರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

22/09/2020 07:06 pm

Cinque Terre

10.66 K

Cinque Terre

0

ಸಂಬಂಧಿತ ಸುದ್ದಿ