ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಜನ್ಮದಿನಾಚರಣೆ; ಹಳಕಟ್ಟಿ ಹುಟ್ಟಿದ ಮನೆಯಿಂದ ಭವ್ಯ ಮೆರವಣಿಗೆ

ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಧಾರವಾಡದಲ್ಲಿ ವಚನ ಪಿತಾಮಹ ಫ.ಗು.ಹಳಕಟ್ಟಿ ಅವರ ಜನ್ಮ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಜನ್ಮ ದಿನಾಚರಣೆ ಅಂಗವಾಗಿ ಹಳಕಟ್ಟಿ ಅವರ ಭಾವಚಿತ್ರದ ಭವ್ಯ ಮೆರವಣಿಗೆ ಮಾಡಲಾಯಿತು.

ಮೆರವಣಿಗೆಗೆ ಮೇಯರ್ ಈರೇಶ ಅಂಚಟಗೇರಿ ಹಾಗೂ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅವರು ಚಾಲನೆ ನೀಡಿದರು. ಧಾರವಾಡ ಹೊಸಯಲ್ಲಾಪುರದ ಶುಕ್ರವಾರಪೇಟೆಯಲ್ಲಿರುವ ಹಳಕಟ್ಟಿ ಅವರ ಹುಟ್ಟಿದ ಮನೆಯಿಂದ ಭವ್ಯ ಮೆರವಣಿಗೆ ಆರಂಭವಾಯಿತು. ಗಣ್ಯರು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

ಮೆರವಣಿಗೆಯಲ್ಲಿ ಕರಡಿ ಮಜಲು, ಮಹಿಳೆಯರ ಡೊಳ್ಳು ಕುಣಿತ, ಜಗ್ಗಲಗಿ ಕುಣಿತ, ಗೊಂಬೆ ಕುಣಿತ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಿ ಗಮನ ಸೆಳೆದವು.

Edited By :
Kshetra Samachara

Kshetra Samachara

02/07/2022 12:03 pm

Cinque Terre

24.97 K

Cinque Terre

0

ಸಂಬಂಧಿತ ಸುದ್ದಿ