ನವಲಗುಂದ : ಮಂಗಳವಾರ ರಾತ್ರಿ ತಾಲ್ಲೂಕಿನ ಕಾಲವಾಡ ಗ್ರಾಮದ ಶ್ರೀ ಗುರುಶಾಂತೇಶ್ವರ ಸ್ವಾಮಿಗಳವರ ಜಾತ್ರಾ ಮಹೋತ್ಸವ ಹಾಗೂ ಸದ್ಗುರು ಶ್ರೀ ಮಲ್ಲಯ್ಯ ಸ್ವಾಮಿಗಳವರ 64ನೇ ಪುಣ್ಯಾರಾಧನೆ ಹಿನ್ನೆಲೆಯಲ್ಲಿ ಆಹೋರಾತ್ರಿ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಹೌದು ಲಿಂಗರಾಜ ಬುವಾ, ಯರಗುಪ್ಪಿ ಶಿಷ್ಯವೃಂದದಿಂದ ನಡೆದ ಆಹೋರಾತ್ರಿ ಸಂಗೀತ ಕಾರ್ಯಕ್ರಮಕ್ಕೆ ಶಂಕರಪ್ಪ ಬೋಕನವರ, ಶಿದ್ದಯ್ಯ ಸ್ವಾಮಿಗಳು ದೀಪ ಬೆಳಗಿಸುವ ಮೂಲಕ ಚಾಲನೆಯನ್ನು ನೀಡಿದರು. ಈ ಸಂಧರ್ಭದಲ್ಲಿ ಕಾಲವಾಡ ಗ್ರಾಮಸ್ಥರು ಸೇರಿದಂತೆ ಸುತ್ತಮುತ್ತಲಿನ ಗ್ರಾಮದವರು ಉಪಸ್ಥಿತರಿದ್ದರು.
Kshetra Samachara
05/01/2022 10:22 am