ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಶ್ರಮದಾನ

ನವಲಗುಂದ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 152 ನೇ ಜನ್ಮ ದಿನದ ಅಂಗವಾಗಿ ಪಟ್ಟಣದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಸಿಬ್ಬಂದಿಗಳಿಂದ ಇಂದು ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಇನ್ನು ಕಾರ್ಯಕ್ರಮದಲ್ಲಿ ಕೆ ಎಸ್ ಕುಂದರಗಿ ಮಾತನಾಡಿ, ಮಕ್ಕಳಲ್ಲಿ ಸಾರ್ವಜನಿಕ ಸ್ಥಳಗಳ ಬಗ್ಗೆ ನಮ್ಮದು ಎಂಬ ಭಾವನೆಯನ್ನು ಮಕ್ಕಳಲ್ಲಿ ಮೂಡಿಸಬೇಕು. ದೇಶ ನಾಡು-ನುಡಿ ಕೇವಲ ಒಂದೇ ದಿನಕ್ಕೆ ಸೀಮಿತವಾಗಬಾರದು, ಮಹಾನ್ ಪುರುಷರ ಆದರ್ಶಗಳನ್ನು ನಡೆಸಿಕೊಂಡು ಅವರು ಹಾಕಿಕೊಟ್ಟ ಹಾದಿಯಲ್ಲಿ ನಮ್ಮ ಮಕ್ಕಳನ್ನು ನಡೆಸಬೇಕು. ಅಂದಾಗ ಮಾತ್ರ ಜಯಂತೋತ್ಸವಕ್ಕೆ ಒಂದು ಅರ್ಥ ಬರುತ್ತದೆ. ಮಕ್ಕಳಲ್ಲಿ ಪಠ್ಯೇತರ ಚಟುವಟಿಕೆಗಳನ್ನು ಸಹ ಬೆಳೆಸಬೇಕು ಎಂದರು. ಈ ವೇಳೆ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು ಹಾಗೂ ಸಹಾಯಕ ಸಿಬ್ಬಂದಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

02/10/2021 11:02 pm

Cinque Terre

19.83 K

Cinque Terre

0

ಸಂಬಂಧಿತ ಸುದ್ದಿ