ನವಲಗುಂದ : ಗುರುವಾರ ಕನ್ನಡದ ಶ್ರೇಷ್ಠ ಗೀತೆಗಳ ಗಾಯನ ಕಾರ್ಯಕ್ರಮ ಹಿನ್ನಲೆ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.3 ರಲ್ಲಿ ಹಾಗೂ ಸರ್ಕಾರಿ ನೌಕರರ ಸಭಾಭವನಗಳಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ನವೀನ ಹುಲ್ಲೂರ, ಅಧಿಕಾರಿಗಳು ಸೇರಿದಂತೆ ನೂರಾರು ಜನರು ಭಾಗಿಯಾಗಿ ಮಾತಾಡ್ ಮಾತಾಡ್ ಕನ್ನಡ, ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನದಲ್ಲಿ ಏಕಕಾಲದಲ್ಲಿ ಕನ್ನಡದ ಶ್ರೇಷ್ಠತೆ ಸಾರುವ ಗೀತೆಗಳನ್ನು ಮನಮೋಹಕವಾಗಿ ಪ್ರಸ್ತುತಪಡಿಸಲಾಯಿತು. ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಶಿಕ್ಷಕ ವೃಂದದವರು ಕನ್ನಡದ ಬಾವುಟ ಹಾರಿಸಿ, ಡೊಳ್ಳಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು.
Kshetra Samachara
28/10/2021 11:10 pm