ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂರು ಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮಿಗಳಿಗೆ ಗೌರವ ಡಾಕ್ಟರೇಟ್ ಭಕ್ತರಲ್ಲಿ ಸಂಭ್ರಮ

ಹುಬ್ಬಳ್ಳಿ: ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದಿಂದ ಹುಬ್ಬಳ್ಳಿ ಮೂರು ಸಾವಿರ ಮಠದ ಶ್ರೀ ಜಗದ್ಗುರು ಗುರುಸಿದ್ಧ ರಾಜಯೋಗಿಂದ್ರ ಮಹಾಸ್ವಾಮಿಗಳಿಗೆ ಗೌರವ ಡಾಕ್ಟರೇಟ್ ನೀಡಿರುವುದು ಭಕ್ತರಿಗೆ ಸಂತಸ ತಂದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್‌ ಹೇಳಿದರು.

ಹುಬ್ಬಳ್ಳಿ ಮೂರು ಸಾವಿರ ಮಠದಲ್ಲಿ ಸ್ವಾಮೀಜಿಗಳಿಗೆ ಅಭಿನಂದನೆ ಸಲ್ಲಿಸಿ ಅವರು ಮಾತನಾಡಿದರು.

ಸ್ವಾಮೀಜಿಗಳ ಸಾಮಾಜಿಕ ಕಾರ್ಯಗಳಿಗೆ ಗೌರವ ಡಾಕ್ಟರೇಟ್ ಸಂದಿದೆ. ಇದರಿಂದ ಇನ್ನೂ ಹೆಚ್ಚಿನ ಸಾಮಾಜಿಕ, ಧಾರ್ಮಿಕ ಕಾರ್ಯಗಳನ್ನು ಮಾಡಲು ಪ್ರೇರಣೆಯಾಗಿದೆ. ಸ್ವಾಮೀಜಿಗಳಿಗೆ ದೇವರು ಆರೋಗ್ಯ ಆಯುಷ್ಯ ನೀಡಲಿ ಎಂದು ಹೇಳಿದರು.

Edited By :
Kshetra Samachara

Kshetra Samachara

05/10/2020 07:45 pm

Cinque Terre

19.12 K

Cinque Terre

0

ಸಂಬಂಧಿತ ಸುದ್ದಿ