ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಗೌರಿ ಹುಣ್ಣಿಮೆಗೆ ಸಿದ್ದಗೊಂಡು ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ ಸಕ್ಕರೆ ಗೊಂಬೆ

ವರದಿ: ವಿನೋದ ಇಚ್ಚಂಗಿ, ಪಬ್ಲಿಕ್ ನೆಕ್ಸ್ಟ್ ನವಲಗುಂದ

ನವಲಗುಂದ : ಗೌರಿ ಹುಣ್ಣಿಮೆ ಬಂತೆಂದರೆ ಸಾಕು ಮಾರುಕಟ್ಟೆಯಲ್ಲಿ ವಿಧ ವಿಧವಾದ ಬಣ್ಣ ಬಣ್ಣದ ಸಕ್ಕರೆ ಗೊಂಬೆಗಳು ರಾರಾಜಿಸ ತೊಡಗುತ್ತವೆ. ಹೆಂಗಳೆಯರಲ್ಲಿ ಈ ಹಬ್ಬ ಅದೇನೋ ಸಡಗರ- ಸಂಭ್ರಮವನ್ನು ತಂದಿರುತ್ತೆ, ಕೆಲವು ಮನೆಗಳಲ್ಲಿ ಮಾತ್ರ ಪ್ರತಿಷ್ಠಾಪಿಸುವ ಗೌರಮ್ಮನ ವಿಗ್ರಹಕ್ಕೆ ಗೌರಿ ಹುಣ್ಣಿಮೆ ರಾತ್ರಿಯಂದು ಸಕ್ಕರೆ ಗೊಂಬೆಗಳಿಂದ ಆರತಿ ಬೆಳಗಲು ಓಡಾಡುವ ಹೆಣ್ಣು ಮಕ್ಕಳ ಸಂಭ್ರಮ ಹೇಳತೀರದು. ಇನ್ನು ಹಬ್ಬದಲ್ಲಿ ಪ್ರಮುಖ ಪಾತ್ರವನ್ನು ವಹಿಸುವ ಈ ಸಕ್ಕರೆ ಗೊಂಬೆಗಳು ಈಗ ಎಲ್ಲೆಡೆ ಸಿದ್ದಗೊಳ್ಳುತ್ತಿವೆ...

ಹೌದು ಉತ್ತರ ಕರ್ನಾಟಕದ ಅದರಲ್ಲೂ ನವಲಗುಂದ ತಾಲ್ಲೂಕಿನ ಭಾಗದಲ್ಲಿ ಹೆಚ್ಚು ಆಚರಿಸಲಾಗುವ ಗೌರಿ ಹುಣ್ಣಿಮೆಯಲ್ಲಿ ಸಕ್ಕರೆ ಗೊಂಬೆಗಳು ಇಲ್ಲದಿದ್ದರೆ ಗೌರಿ ಹುಣ್ಣಿಮೆ ಆಚರಣೆಯೇ ಅಪೂರ್ಣ ಎಂಬ ನಂಬಿಕೆಯೂ ಇಲ್ಲಿದೆ. ಅನೇಕ ಕುಟುಂಬಗಳು ತಿಂಗಳ ಮೊದಲೇ ಸಕ್ಕರೆ ಗೊಂಬೆಗಳ ತಯಾರಿಕೆಯಲ್ಲಿ ತೊಡಗಿ ಮಾರಾಟ ಮಾಡಲು ಅಣಿಯಾಗಿರುತ್ತವೆ. ಸಕ್ಕರೆ ಗೊಂಬೆ ತಯಾರಿಕೆ ಒಂದು ಕಲೆ. ಶುದ್ಧ ಸಕ್ಕರೆಗೆ ತಕ್ಕಂತೆ ನೀರು, ನಿಂಬೆರಸ, ಹಾಲು, ಏಲಕ್ಕಿ ಹಾಕಿ ಒಲೆಯ ಮೇಲೆ ಹದ ಬರುವ ಹಾಗೆ ಕಾಯಿಸಲಾಗುತ್ತದೆ. ಆ ಬಳಿಕ ಹದವನ್ನು ಗೊಂಬೆ ತಯಾರಿಕೆಯ ಕಟ್ಟಿಗೆ ಅಚ್ಚುಗಳಿಗೆ ಹಾಕಿದಾಗ ಕೆಲವೇ ಸಮಯದಲ್ಲಿ ಬಗೆಬಗೆಯ ಗೊಂಬೆಗಳು ಸಿದ್ಧವಾಗುತ್ತವೆ.

ಇನ್ನು ಜನರಲ್ಲಿರುವ ಭಕ್ತಿ, ಭಾವನೆಗಳಿಗೆ ತಕ್ಕಂತೆ ಶಿವ, ಪಾರ್ವತಿ, ಒಂಟೆ, ಆನೆ, ರಥ, ಅರ್ಜುನನ ಬಿಲ್ಲು, ಮಂಟಪ, ಆಂಜನೇಯ, ಬಸವಣ್ಣ, ವಿವಿಧ ರೀತಿಯ ಪಶುಪಕ್ಷಿಗಳು ಹೀಗೆ ಅನೇಕ ಕಲಾಕೃತಿಗಳಲ್ಲಿ ವಿಧ ವಿಧದ ಬಣ್ಣಗಳಲ್ಲಿ ಆಕರ್ಷಿಸುತ್ತಿವೆ. ಹೊಸದಾಗಿ ಮದುವೆ ನಿಶ್ಚಯಗೊಂಡ ವರನ ಕಡೆಯವರು ವಧುವಿನ ಮನೆಗೆ ಗೌರಿ ಹುಣ್ಣಿಮೆಯಂದು ದಂಡಿಯ ಜೊತೆಗೆ ಸಕ್ಕರೆ ಗೊಂಬೆಗಳನ್ನು ತೆಗೆದುಕೊಂಡು ಬರುವ ಸಂಪ್ರದಾಯ ಸಹ ಇದೆ.

Edited By : Nagesh Gaonkar
Kshetra Samachara

Kshetra Samachara

18/11/2021 06:01 pm

Cinque Terre

20.58 K

Cinque Terre

0

ಸಂಬಂಧಿತ ಸುದ್ದಿ