ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಹೋಳಿ ಕಾಮಣ್ಣನ ಆಚರಣೆ ಅದ್ದೂರಿಯಾಗಿ ನಡೆಯುತ್ತಿದೆ. ಅದರಲ್ಲೂ ಹೊಸ ಮೇದಾರ ಓಣಿಯ ಕಾಮಣ್ಣನ ವೈಭವವನ್ನು ನೋಡೋದೇ ಚೆಂದ.. ಹೌದು, ಹುಬ್ಬಳ್ಳಿಯ ಮೇದಾರ ಓಣಿಯಲ್ಲಿ ಮೇದಾರ ಸಮುದಾಯದಿಂದ ಪ್ರತಿಷ್ಟಾಪನೆ ಮಾಡಿರುವ ಹೋಳಿ ಕಾಮಣ್ಣ ಸಾಕಷ್ಟು ವೈಭವವನ್ನು ಒಳಗೊಂಡಿರುತ್ತದೆ. ಇಲ್ಲಿ ಬೃಹತ್ ಆಕಾರದ ಹೋಳಿ ಕಾಮಣ್ಣನನ್ನು ಪ್ರತಿಷ್ಟಾಪನೆ ಮಾಡಲಾಗಿದ್ದು, ಇದು ಯುವಕರ ಉತ್ಸಾಹಕ್ಕೆ ಹಿಡಿದ ಕೈಗನ್ನಡಿಯಾಗಿದೆ.
ಮೇದಾರ ಓಣಿಯಲ್ಲಿ ಸುಮಾರು ಒಂದು ತಿಂಗಳಿನಿಂದಲೇ ಹೋಳಿ ಕಾಮಣ್ಣನ ಸ್ಥಾಪನೆಗೆ ಸಿದ್ಧತೆ ನಡೆಸಲಾಗುತ್ತದೆ. ಬಿದಿರಿನ ಕಡ್ಡಿಯಿಂದ ಬೃಹತ್ ಗಾತ್ರದ ಕಾಮಣ್ಣನ ನಿರ್ಮಾಣ ಮಾಡಲಾಗುತ್ತದೆ. ಅಲ್ಲದೇ ಹೊಸ ಮೇದಾರ ಓಣಿಯಲ್ಲಿ ಕಾಮಣ್ಣನ ಪ್ರತಿಷ್ಟಾಪನೆ ಮಾಡಿ ವಿಶೇಷವಾಗಿ ಪೂಜೆ ಸಲ್ಲಿಸಿ ಹುಣ್ಣಿಮೆ ಕಳೆದ ಐದು ದಿನಗಳ ಬಳಿಕ ರಂಗಪಂಚಮಿಯಂದು ದಹನ ಮಾಡುವ ಮೂಲಕ ಆಚರಣೆ ಮಾಡಲಾಗುತ್ತದೆ.
ಇನ್ನು ಹೊಸ ಮೇದಾರ ಓಣಿಯಲ್ಲಿರುವ ಕಾಮಣ್ಣ, ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಆರಾಧ್ಯದೈವವಾಗಿದ್ದು, ಭಕ್ತರು ಹಲವಾರು ಹರಕೆ ಕಟ್ಟಿಕೊಂಡು ಇಲ್ಲಿ ವಿಶೇಷ ಪೂಜೆ ಸಲ್ಲಿಸುವುದು ವಿಶೇಷವಾಗಿದೆ.
ಮಲ್ಲೇಶ ಸೂರಣಗಿ, ಪಬ್ಲಿಕ್ ನೆಕ್ಸ್ಟ್, ಹುಬ್ಬಳ್ಳಿ
Kshetra Samachara
21/03/2022 01:24 pm