ಧಾರವಾಡ: ಧಾರವಾಡ ತಾಲೂಕಿನ ಕವಲಗೇರಿ ಶಿವಾನಂದ ಸದ್ಗುರು ಮಹಾಸ್ವಾಮಿಗಳ ರಥೋತ್ಸವ ಅದ್ಧೂರಿಯಿಂದ ನೆರವೇರಿತು.
ಜಾತ್ರಾ ಮಹೋತ್ಸವದ ದಿವ್ಯ ಸಾನ್ನಿಧ್ಯವನ್ನು ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಮಹಾಸ್ವಾಮೀಜಿ, ಅಮ್ಮಿನಭಾವಿ ಪಂಚಗೃಹ ಹಿರೇಮಠದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಕವಲಗೇರಿ ಶಿವಾನಂದ ಮಠದ ಶಿವಾನಂದ ಸರಸ್ವತಿ ಸ್ವಾಮೀಜಿ ವಹಿಸಿದ್ದರು.
ಯುಗಾದಿ ಹಬ್ಬದ ಪ್ರಯುಕ್ತ ಕವಲಗೇರಿ ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಪ್ರವಚನ ಕಾರ್ಯಕ್ರಮ ಸಹ ಹಮ್ಮಿಕೊಳ್ಳಲಾಗಿತ್ತು. ಅಲ್ಲದೇ ಜಾತ್ರಾ ಮಹೋತ್ಸವದ ಅಂಗವಾಗಿ ಸಾಮೂಹಿಕ ವಿವಾಹಗಳನ್ನೂ ಹಮ್ಮಿಕೊಳ್ಳಲಾಗಿತ್ತು. ಸಂಜೆ ಸಾವಿರಾರು ಭಕ್ತರ ಹರ್ಷೋದ್ಘಾರಗಳ ಮಧ್ಯೆ ತೇರನ್ನು ಎಳೆಯಲಾಯಿತು. ತೇರಿಗೆ ಅಲ್ಲಿ ಸೇರಿದ್ದ ಭಕ್ತರು ಬಾಳೆಹಣ್ಣು, ನಿಂಬೆಹಣ್ಣು, ಉತ್ತುತ್ತಿಗಳನ್ನು ತೂರಿ ಭಕ್ತಿಯ ನಮನ ಸಲ್ಲಿಸಿದರು.
Icon: ಭಕ್ತರ ಹರ್ಷೋದ್ಘಾರ
Kshetra Samachara
04/04/2022 06:22 pm