ನವಲಗುಂದ: ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ನಿಮಿತ್ತ ನವಲಗುಂದ ಪಟ್ಟಣದಲ್ಲಿ ಸಂಭ್ರಮ ಮನೆ ಮಾಡಿತ್ತು. ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಮೆರವಣಿಗೆಯಲ್ಲಿ ಮಾಜಿ ಶಾಸಕ ಎನ್.ಹೆಚ್ ಕೋನರಡ್ಡಿ ಟ್ರ್ಯಾಕ್ಟರ್ ಚಾಲನೆ ಮಾಡಿದರೇ, ವಿನೋದ ಅಸೂಟಿ ಅವರು ಧ್ವಜವನ್ನು ಹಾರಿಸುತ್ತಿರುವ ದೃಶ್ಯಗಳು ಕಂಡು ಬಂದವು.
ನವಲಗುಂದ ಪಟ್ಟಣದಲ್ಲಿನ ಪ್ರಮುಖ ರಸ್ತೆಗಳಲ್ಲಿ ನೀಲಿ ಧ್ವಜಗಳು ಹಾರಾಡುತ್ತಿದ್ದವು. ಮಾಜಿ ಶಾಸಕ ಎನ್ ಹೆಚ್ ಕೋನರಡ್ಡಿ, ವಿನೋದ ಅಸೂಟಿ ಹಾಗೂ ದಲಿತ ಪರ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಹೊರಟ ಮೆರವಣಿಗೆಯಲ್ಲಿ ಯುವಕರು, ಮಕ್ಕಳು ಡಿಜೆ ಸೌಂಡಿಗೆ ಕುಣಿದು ಕುಪ್ಪಳಿಸಿದರು. ಬಾಬಾ ಸಾಹೇಬರ ಬೃಹತ್ ಭಾವಚಿತ್ರವನ್ನು ಪಟ್ಟಣದಲ್ಲಿ ಮೆರವಣಿಗೆ ಮಾಡಿದರು. ಈ ವೇಳೆ ಪೊಲೀಸ್ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿತ್ತು.
Kshetra Samachara
14/04/2022 06:57 pm