ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಭಾವೈಕ್ಯತೆಗೆ ಸಾಕ್ಷಿಯಾದ ರಂಜಾನ್ ಆಚರಣೆ

ಹುಬ್ಬಳ್ಳಿ: ಇಂದು ಬಸವಣ್ಣನವರ ಜಯಂತಿ ಹಿನ್ನೆಲೆಯಲ್ಲಿ, ಮುಸ್ಲಿಂ ಬಾಂಧವರ ಪವಿತ್ರ ರಂಜಾನ ಹಬ್ಬಕ್ಕೆ ಶಿವಮಠದ ಚಂದ್ರಶೇಖರ ಶಿವಯೋಗಿ ಸ್ವಾಮೀಜಿ ಪ್ರಾರ್ಥನೆ ನಡೆಯುತ್ತಿರುವ ಈದ್ಗಾ ಮೈದನಕ್ಕೆ ಭೇಟಿ ನೀಡಿ ರಂಜಾನ್ ಹಬ್ಬದ ಶುಭಕೋರಿ ಹಿಂದೂ ಮುಸ್ಲಿಂ ಭಾವೈಕ್ಯತೆಗೆ ಸಂಕೇತವಾಗಿದ್ದಾರೆ.

ಕಳೆದು ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಸಾಮೂಹಿಕ ಪ್ರಾರ್ಥನೆ. ಈ ವರ್ಷ ಸಾವಿರಾರು ಮುಸ್ಲಿಂ ಬಾಂಧವರು ಪ್ರಾರ್ಥನೆಯಲ್ಲಿ ಭಾಗವಹಿಸಿದ್ದಾರೆ. ಅಷ್ಟೇ ಅಲ್ಲದೆ ಧರ್ಮಗಳ ಮಧ್ಯೆ ಕಂದಕ ಬೇಡ. ನಾವೆಲ್ಲರೂ ಒಂದೇ ಎಂಬ ಭಾವದಿಂದ ಇರಬೇಕೆಂದು ಹೊಸಮಠದ ಚಂದ್ರಶೇಖರ ಶಿವಯೋಗಿ ಸ್ವಾಮೀಜಿ ಎಲ್ಲರಲ್ಲಿ ಮನವಿ ಮಾಡಿದ್ದಾರೆ. ಈ ವೇಳೆ ರಂಜಾನ್ ಹಾಗೂ ಬಸವ ಜಯಂತಿ ಹಿನ್ನೆಲೆ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ಸಂತಸ ವ್ಯಕ್ತಪಡಿಸಿದರು.

Edited By : Manjunath H D
Kshetra Samachara

Kshetra Samachara

03/05/2022 05:07 pm

Cinque Terre

97.23 K

Cinque Terre

27

ಸಂಬಂಧಿತ ಸುದ್ದಿ