ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕೆಲಗೇರಿಯಲ್ಲಿ ಕಲ್ಮೇಶ್ವರ ದೇವರ ವೈಭವದ ರಥೋತ್ಸವ

ಧಾರವಾಡ: ಧಾರವಾಡದ ಕೆಲಗೇರಿಯಲ್ಲಿರುವ ಕಲ್ಮೇಶ್ವರ ದೇವರ ಜಾತ್ರಾ ಮಹೋತ್ಸವ ಮಂಗಳವಾರ ಸಾವಿರಾರು ಭಕ್ತರ ಹರ್ಷೋದ್ಘಾರಗಳ ಮಧ್ಯೆ ವಿಜೃಂಭಣೆಯಿಂದ ನೆರವೇರಿತು.

ಜಾತ್ರಾ ಮಹೋತ್ಸವದ ಅಂಗವಾಗಿ ಬೆಳಿಗ್ಗೆಯಿಂದ ದೇವಸ್ಥಾನದಲ್ಲಿ ಅಭಿಷೇಕ ಹಾಗೂ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು.

ಸಂಜೆ 4 ಗಂಟೆ ಸುಮಾರಿಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಸಾವಿರಾರು ಭಕ್ತರ ಹರ್ಷೋದ್ಘಾರಗಳ ಮಧ್ಯೆ ಎಳೆಯಲ್ಪಟ್ಟ ರಥಕ್ಕೆ ಭಕ್ತರು ಉತ್ತುತ್ತಿ, ಬಾಳೆಹಣ್ಣು ತೂರಿ ಭಕ್ತಿಯ ನಮನ ಸಲ್ಲಿಸಿದರು. ಜಾತ್ರಾ ಮಹೋತ್ಸವದಲ್ಲಿ ವಿವಿಧ ಕಲಾ ತಂಡದವರು ಪಾಲ್ಗೊಂಡು ಗಮನಸೆಳೆದರು.

Edited By : Manjunath H D
Kshetra Samachara

Kshetra Samachara

03/05/2022 10:34 pm

Cinque Terre

19.16 K

Cinque Terre

0

ಸಂಬಂಧಿತ ಸುದ್ದಿ