ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ: ನಾಳೆಯಿಂದ ಕೊಡ್ಲಿವಾಡ ವೀರಭದ್ರೇಶ್ವರ ಜಾತ್ರಾ ಮಹೋತ್ಸವ

ಕುಂದಗೋಳ: ತಾಲೂಕಿನ ಕೊಡ್ಲಿವಾಡ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಾಳೆ ಮೇ.13 ಶುಕ್ರವಾರದಂದು ಸಂಜೆ 7.30 ಕ್ಕೆ ಶ್ರೀ ಮಹಾಲಕ್ಷ್ಮಿ ಪೂಜೆ ಪ್ರಾರಂಭದೊಂದಿಗೆ ಜರುಗುಲಿದೆ.

ಮೇ.14 ರಂದು ಸಂಜೆ 5.30ಕ್ಕೆ ಮಹಾ ರಥೋತ್ಸವ ನಡೆಯಲಿದ್ದು, ಮಾ.15 ರಂದು 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಅಗ್ನಿ ಮಹೋತ್ಸವ ಕಾರ್ಯಕ್ರಮ ಜರುಗುವುದು.

ಮೂರು ದಿನಗಳ ಈ ಜಾತ್ರಾ ಮಹೋತ್ಸವದಲ್ಲಿ ವಿವಿಧ ಕಾರ್ಯಕ್ರಮಗಳು ಜರಗುವುದು ಕಾರ್ಯಕ್ರಮದಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ವೀರಭದ್ರದೇವರ ಕೃಪೆಗೆ ಪಾತ್ರರಾಗಬೇಕೆಂದು ಎಂದು ವೀರಭದ್ರೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿ ಅಧ್ಯಕ್ಷರು ಎ.ಬಿ. ಉಪ್ಪಿನ ಪಬ್ಲಿಕ್ ನೆಕ್ಸ್ಟ್ ಗೆ ತಿಳಿಸಿದ್ದಾರೆ.

ಜಾತ್ರೆಗೆ ಆಗಮಿಸುವ ಭಕ್ತರು ಕೋವಿಡ್ ನಿಯಮ ಪಾಲಿಸುವುದು ಕಡ್ಡಾಯವಾಗಿದ್ದು, ತಮ್ಮ ಯಾವುದೇ ಕಾಣಿಕೆಯನ್ನು ಸಲ್ಲಿಸಿ ರಸೀದಿಯನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

12/05/2022 10:44 pm

Cinque Terre

24.23 K

Cinque Terre

3

ಸಂಬಂಧಿತ ಸುದ್ದಿ