ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕೋಡಿ ಬಿದ್ದ ನರೇಂದ್ರ ಕೆರೆ: ಶಾಸಕರಿಂದ ಬಾಗಿನ ಅರ್ಪಣೆ

ಧಾರವಾಡ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ಹೊಸಕೆರೆ ತುಂಬಿ ಕೋಡಿ ಬಿದ್ದಿದೆ.

ಗುರುವಾರ ಕೆರೆಗೆ ಭೇಟಿ ನೀಡಿದ ಶಾಸಕ ಅಮೃತ ದೇಸಾಯಿ, ಇಲ್ಲಿನ ಸ್ಥಿತಿಗತಿ ಪರಿಶೀಲನೆ ನಡೆಸಿದರು. ನಂತರ ಕೆರೆಗೆ ಬಾಗಿನ ಅರ್ಪಿಸಿದರು.

ಸುಮಾರು 50 ಕ್ಕಿಂತಲೂ ಹೆಚ್ಚು ಎಕರೆ ಪ್ರದೇಶದಲ್ಲಿ ಈ ಕೆರೆ ಇದ್ದು, ಈಗಾಗಲೇ ಮಳೆಯಿಂದ ಪೂರ್ಣ ಭರ್ತಿಯಾಗಿದೆ. ಹೆಚ್ಚಾದ ನೀರು ಹೊರಗಡೆ ಹರಿಯುತ್ತಿದೆ. ಶಾಸಕ ಅಮೃತ ದೇಸಾಯಿ ಅವರು ಈ ಸಂಬಂಧ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿ, ಕೆರೆಗೆ ಬಾಗಿನ ಅರ್ಪಿಸಿದರು.

Edited By : Nagesh Gaonkar
Kshetra Samachara

Kshetra Samachara

14/07/2022 05:44 pm

Cinque Terre

22.34 K

Cinque Terre

0

ಸಂಬಂಧಿತ ಸುದ್ದಿ