ಹುಬ್ಬಳ್ಳಿ: ಸಿದ್ಧಾರೂಢ ಸ್ವಾಮೀಜಿಯ 93ನೇ ಪುಣ್ಯಾರಾಧನೆ ಹಿನ್ನೆಲೆಯಲ್ಲಿ ತೆಪ್ಪೋತ್ಸವ ಜರುಗಿತು. ಸಾವಿರಾರು ಭಕ್ತರು ತೆಪ್ಪೋತ್ಸವದಲ್ಲಿ ಪಾಲ್ಗೊಳ್ಳುವ ಮೂಲಕ ಸಿದ್ದರೂಢ ಶ್ರೀಗಳ ಕೃಪೆಗೆ ಪಾತ್ರರಾದರು.
ಹುಬ್ಬಳ್ಳಿಯ ಸಿದ್ಧಾರೂಢರ ಮಠದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಟ್ರಸ್ಟ್ ಕಮಿಟಿ ಆಶ್ರಯದಲ್ಲಿ ನಡೆದ ತಪ್ಪೋತ್ಸವಕ್ಕೆ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಸಾಕ್ಷಿಯಾದರು. ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣ ತೆಪೋತ್ಸದವ ರದ್ದಾಗಿತ್ತು.
ಆದರೆ ಈ ವರ್ಷ ಕಣ್ಣು ಹಾಯಿಸಿದ ಕಡೆಯಲ್ಲಿ ಜನ ಸಾಗರವೇ ನೆರೆದಿತ್ತು. ಓಂ ನಮ: ಶಿವಾಯ ನಾಮಸ್ಮರಣೆಗಳು ಅನುರಣಿಸಿದವು. ಕಲ್ಯಾಣಿಯಲ್ಲಿ ತೇರು ಐದು ಸುತ್ತ ಪ್ರದಕ್ಷಿಣೆ ಹಾಕಿತು. ಕಲ್ಯಾಣಿಯ ಸುತ್ತ ಕಿಕ್ಕಿರಿದು ಸೇರಿದ ಭಕ್ತರು ಉತ್ತತ್ತಿ, ಬಾಳೆಹಣ್ಣು, ಲಿಂಬೆಹಣ್ಣು ಎಸೆದು ಸ್ವಾಮಿ ಆಶೀರ್ವಾದ ಪಡೆದು ಕೃತಾರ್ಥರಾದರು.
ರಾಜ್ಯ ಅಲ್ಲದೇ ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶದಿಂದ ಆಗಮಿಸಿದ ಭಕ್ತರು ಜಲರಥೋತ್ಸವದಲ್ಲಿ ಪಾಲ್ಗೊಳ್ಳುವ ಮೂಲಕ ಸಿದ್ದಾರೂಢರ ಆಶೀರ್ವಾದ ಪಡೆದುಕೊಂಡರು.
Kshetra Samachara
14/08/2022 08:02 am