ನವಲಗುಂದ : ಕಡೆ ಶ್ರಾವಣ ಸೋಮವಾರ ನಿಮಿತ್ತ ಪಟ್ಟಣ ಸೇರಿದಂತೆ ತಾಲ್ಲೂಕಿನ ಹಲವೆಡೆ ಜಾತ್ರಾ ಮಹೋತ್ಸವದ ಸಂಭ್ರಮ ಮುಗಿಲು ಮುಟ್ಟಿತ್ತು. ವಿವಿಡೆದೆ ರಥೋತ್ಸವದಲ್ಲಿ ಸಹಸ್ರಾರು ಭಕ್ತರು ಸಂಭ್ರಮದಿಂದ ಪಾಲ್ಗೊಂಡರು.
ನವಲಗುಂದ ಪಟ್ಟಣದ ಬಸವೇಶ್ವರ ನಗರದಲ್ಲಿ ಹಾದಿಬಸವೇಶ್ವರ ಪಲ್ಲಕ್ಕಿ ಉತ್ಸವ ಮೆರವಣಿಗೆ ಅದ್ದೂರಿಯಾಗಿ ನೆರವೇರಿದ್ದು, ತಾಲ್ಲೂಕಿನ ಕುಮಾರಗೋಪ್ಪ ಗ್ರಾಮದಲ್ಲಿ ಸಿದ್ದಲಿಂಗೇಶ್ವರ ರಥೋತ್ಸವ ಅತೀ ವೈಭವದಿಂದ ಜರುಗಿತು. ಖನ್ನೂರ ಗ್ರಾಮದ ಮೊಟ ಬಸವೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ನೂರಾರು ಜನ ಭಾಗಿಯಾಗಿ ಸಂಭ್ರಮ ಪಟ್ಟರು.
Kshetra Samachara
23/08/2022 08:21 am