ನವಲಗುಂದ : "ಜಲಜೀವನ್ ಮಿಷನ್” ಯೋಜನೆಯಡಿ ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಜವಳಿ ಮತ್ತು ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಅವರು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಅಂದಾಜು ಮೊತ್ತ 56 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಕುಡಿಯುವ ನೀರಿನ ಪೈಪಲೈನ್ ಅಳವಡಿಸುವುದು ಮತ್ತು ಮನೆಗಳಿಗೆ ನಳಗಳ ಜೋಡಣೆ ಕಲ್ಪಿಸುವಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.
Kshetra Samachara
21/08/2021 08:17 am