ನವಲಗುಂದ : ತಾಲೂಕಿನ ಪಡೇಸೂರ ಗ್ರಾಮದಲ್ಲಿ “ಜಲಜೀವನ್ ಮಿಷನ್” ಯೋಜನೆಯಡಿಯಲ್ಲಿ ಅಂದಾಜು 84 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಕುಡಿಯುವ ನೀರಿನ ಪೈಪಲೈನ್ ಅಳವಡಿಸುವ ಮತ್ತು ಮನೆಗಳಿಗೆ ನಳಗಳ ಜೋಡಣೆ ಕಲ್ಪಿಸುವ ಕಾಮಗಾರಿಗೆ ಧಾರವಾಡ ಉಸ್ತುವಾರಿ ಸಚಿವರು ಮತ್ತು ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಗ್ರಾಮಗಳಲ್ಲಿ ಜಲಧಾರೆ ಮತ್ತು ಜಲಜೀವನ ಮಿಷನ್ ಯೋಜನೆಯ ಅನುದಾನದ ಅಡಿಯಲ್ಲಿ ಅನುಷ್ಠಾನಗೊಳ್ಳಲಿರುವ ಶಾಶ್ವತ ಕುಡಿಯುವ ನೀರಿನ ಯೋಜನೆಯ ಕುರಿತು ಗ್ರಾಮಸ್ಥರಿಗೆ ವಿವರಿಸಿದರು. ಮತ್ತು ಗ್ರಾಮಸ್ಥರು ಕುಡಿಯುವ ನೀರಿನ ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಗುರು-ಹಿರಿಯರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಅನೇಕ ಮುಖಂಡರು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
12/01/2022 08:51 am