ಧಾರವಾಡ: ಡಾ.ದ.ರಾ.ಬೇಂದ್ರೆ ಅವರ ಜನ್ಮದಿನ ನಿಮಿತ್ತ ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಪ್ರತಿ ವರ್ಷ ಕೊಡಮಾಡುವ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಗೆ ಅನುವಾದಕ, ಚಿಂತಕ ಪ್ರೊ. ಎಚ್.ಎಸ್. ಶಿವಪ್ರಕಾಶ ಭಾಜನರಾಗಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಡಾ.ಡಿ.ಎಂ. ಹಿರೇಮಠ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇಂದ್ರೆ ಅವರ 125ನೇ ಜನ್ಮದಿನಾಚರಣೆ ಸಂದರ್ಭದಲ್ಲಿ 2021ನೇ ಸಾಲಿನ ಪ್ರಶಸ್ತಿಗೆ ಶಿವಪ್ರಕಾಶ ಭಾಜನರಾಗಿದ್ದಾರೆ. ಪ್ರಶಸ್ತಿಯು 1 ಲಕ್ಷ ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ ಎಂದರು.
Kshetra Samachara
20/01/2021 12:01 pm