ನವಲಗುಂದ : ಗುರುವಾರ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮಿಗಳ ಎರಡನೇ ಪುಣ್ಯಾರಾಧನೆ ನಿಮಿತ್ತ ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಶಿವಕುಮಾರ ಸ್ವಾಮಿಗಳ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಲಾಯಿತು.
ನಂತರ ಶ್ರೀ ಶೈಲ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಅನ್ನಪ್ರಸಾದವನ್ನು ಸಹ ಹಮ್ಮಿಕೊಳ್ಳಲಾಗಿತ್ತು. ಇನ್ನು ಕಾರ್ಯಕ್ರಮದಲ್ಲಿ ಗುರುಸಿದ್ದೇಶ್ವರ ಶಿವಾಚಾರ್ಯ ಸ್ವಾಮಿ, ಅಭಿನವ ಬೂದಿಶ್ವರ ಸ್ವಾಮಿ, ಶಿವಶಾಂತವೀರ ಶರಣರು, ಮಾಜಿ ಶಾಸಕ ಏನ್ ಎಚ್ ಕೋನರೆಡ್ಡಿ ಸೇರಿದಂತೆ ಗ್ರಾಮಸ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
Kshetra Samachara
22/01/2021 10:59 am