ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲಿ ಬಾಲಗಂಗಾಧರನಾಥ ಸ್ವಾಮೀಜಿ ಜಯಂತ್ಯುತ್ಸವ

ಧಾರವಾಡ: ಆದಿಚುಂಚನಗಿರಿ ಮಠದ ಡಾ.ಬಾಲಗಂಗಾಧರನಾಥ ಸ್ವಾಮೀಜಿಗಳ 76 ನೇ ಜಯಂತ್ಯುತ್ಸವವನ್ನು ಧಾರವಾಡದ ಬಿಜಿಎಸ್ ಎಜ್ಯುಕೇಶನ್ ಸೆಂಟರ್ ನಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.

ಶಾಲಾ ಆವರಣದಲ್ಲಿರುವ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಮೂರ್ತಿ ಮುಂದೆ ಪೂರ್ಣಾಹುತಿ ಹೋಮ, ಹವನ ಮಾಡಲಾಯಿತು.

ಉಗರಗೋಳದ ಮಹಾಂತ ಸ್ವಾಮೀಜಿ, ಬ್ರಹ್ಮಾನಂದ ಆಶ್ರಮದ ಶಿವಾನಂದ ಸ್ವಾಮೀಜಿ, ಸುಬ್ರಹ್ಮಣ್ಯ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸೇರಿದಂತೆ ವಿವಿಧ ಆಶ್ರಮ ಹಾಗೂ ಮಠದ ಸ್ವಾಮೀಜಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಧಾರವಾಡ ಬಿಜಿಎಸ್ ಎಜ್ಯುಕೇಶನ್ ಸೆಂಟರ್ ಕಾರ್ಯದರ್ಶಿ ಜೆ.ಎನ್.ರಾಮಕೃಷ್ಣೇಗೌಡ ನೇತೃತ್ವದಲ್ಲಿ ಹೋಮ, ಹವನ ಕಾರ್ಯಕ್ರಮ ನಡೆಯಿತು.

Edited By : Manjunath H D
Kshetra Samachara

Kshetra Samachara

22/01/2021 07:41 pm

Cinque Terre

37.03 K

Cinque Terre

0

ಸಂಬಂಧಿತ ಸುದ್ದಿ