ಹುಬ್ಬಳ್ಳಿ: 72 ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಐತಿಹಾಸಿಕ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಸುರೇಶ್ ಇಟ್ನಾಳ ಅವರು ಪ್ರತಿವರ್ಷದ ಸಂಪ್ರದಾಯದಂತೆ ಧ್ವಜಾರೋಹಣ ನೇರವೇರಿಸಿದರು. ಆಯುಕ್ತರಿಗೆ ಹು-ಧಾ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಸೇರಿದಂತೆ ಜನಪ್ರತಿನಿಧಿಗಳು ಭಾಗವಹಿಸಿದರು. ಇದಾದ ಬಳಿಕ ಅಲ್ಲಿಯೇ ಪಕ್ಕದಲ್ಲಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
Kshetra Samachara
26/01/2021 09:33 am