ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ:ಭಾರತದ ಸಂವಿಧಾನ ಜಗತ್ತಿನ ಸರ್ವ ಶ್ರೇಷ್ಠವಾದ ಸಂವಿಧಾನ

ಕಲಘಟಗಿ:ಭಾರತದ ಸಂವಿಧಾನ ಜಗತ್ತಿನ ಸರ್ವ ಶ್ರೇಷ್ಠವಾದ ಸಂವಿಧಾನವಾಗಿದ್ದು,ಗಣರಾಜ್ಯೋತ್ಸವ ದಿನವನ್ನು ದೇಶದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ದಿನವಾಗಿದೆ ಎಂದು ಶಾಸಕ ಸಿ ಎಂ ನಿಂಬಣ್ಣವರ ನುಡಿದರು.

ಅವರು ಪಟ್ಟಣದ ಮಾದರಿ ಕೇಂದ್ರ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ 72 ನೇ ಗಣರಾಜ್ಯೋತ್ಸವದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿ,ಡಾ ಬಿ ಆರ್ ಅಂಬೇಡ್ಕರ್ ಅವರ ನೇತ್ರತ್ವದಲ್ಲಿ ರಚಿತ ಭಾರತದ ಸಂವಿಧಾನ ಸರ್ವ ಶ್ರೇಷ್ಠ ಸಂವಿಧಾನವಾಗಿದೆ ಎಂದರು.

ತಹಶೀಲ್ದಾರ ಅಶೋಕ ಶಿಗ್ಗಾವಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಮಾತನಾಡಿ,

ಭಾರತದ ಸಂವಿಧಾನ ಜಗತ್ತಿನ ಅತ್ಯಂತ ದೊಡ್ಡ ಲಿಖಿತ ಸಂವಿಧಾನವಾಗಿದೆ ಎಂದರು.ಪೊಲೀಸ್ ಇಲಾಖೆಯಿಂದ ಧ್ವಜ ವಂದನೆ ಸಲ್ಲಿಸಲಾಯಿತು.

ಪ ಪಂ ಹಾಗೂ ತಾ ಪಂ,ಜಿ‌ ಪಂ ಜನಪ್ರತಿನಿಧಿಗಳು ಹಾಗೂ ಶಾಲಾ ಶಿಕ್ಷಕರು,ಅಧಿಕಾರಿಗಳು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

26/01/2021 09:50 am

Cinque Terre

11.17 K

Cinque Terre

0

ಸಂಬಂಧಿತ ಸುದ್ದಿ