ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಇಂದು ಸಂಭ್ರಮದ 72 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯ್ತಿ ವತಿಯಿಂದ ಧಾರವಾಡದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ನಂತರ ಡಿಎಆರ್ ಪೊಲೀಸ್ ಸಿಬ್ಬಂದಿಯಿಂದ ಪರೇಡ್ ನಡೆಸಲಾಯಿತು. ಅಲ್ಲದೇ ಸಚಿವರು ವಿವಿಧ ಪೊಲೀಸ್ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದರು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಪೊಲೀಸ್ ಆಯುಕ್ತ ಲಾಬುರಾಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಕಾಂತ ಸೇರಿದಂತೆ ಅನೇಕ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.
Kshetra Samachara
26/01/2021 11:48 am