ಹುಬ್ಬಳ್ಳಿ: ಕಲಾವಿದನ ಕೈಚಳಕದಲ್ಲಿ ಮೂಡಿದ ಸಂಗೊಳ್ಳಿ ರಾಯಣ್ಣ!
ಹುಬ್ಬಳ್ಳಿ- ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನಾಚರಣೆ ಹಿನ್ನೆಲೆಯಲ್ಲಿ, ನಗರದ ಉಜ್ವಲ್ ನರಗುಂದ ಎಂಬ ಕಲಾವಿದನ ಕೈಚಳಕದಿಂದ, ಸಂಗೊಳ್ಳಿ ರಾಯಣ್ಣ ಭಾವಚಿತ್ರವನ್ನು ಬಿಡಿಸುವ ಮೂಲಕ ವಿಶೇಷವಾಗಿ ಆಚರಣೆ ಮಾಡಿದ್ದಾರೆ.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಾಯಣ್ಣ ಭಾವಚಿತ್ರವನ್ನು ಸ್ಕೆಚ್ ಮೂಲಕ ಸ್ವಾತಂತ್ರ್ಯ ಹೋರಾಟಗಾರನಿಗೆ ವಿಶೇಷ ಗೌರವ ಸಲ್ಲಿಸಿದ್ದು, ಕಲಾವಿದನಿಗೆ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಅಭಿನಂದನೆ ಸಲ್ಲಿಸಿ ಸನ್ಮಾನ ಮಾಡಿದರು.