ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಎನ್‌ಎಸ್‌ಎಸ್‌ ವಿದ್ಯಾರ್ಥಿಗಳಿಂದ ಶ್ರಮದಾನ

ನವಲಗುಂದ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ನವಲಗುಂದ ಶಾಸಕರ ಸಹೋದರ ಡಾ. ಎಮ್.ಬಿ.ಮುನೇನಕೊಪ್ಪ ಚಾಲನೆ ನೀಡಿದರು.

ಈ ವೇಳೆ ಪ್ರೊಫೆಸರ್ ಬಸವರಾಜ್ ಸೂಡಿ ಮಾತನಾಡಿ, ಮಕ್ಕಳು ಶಾಲೆಯ ಕೊಠಡಿಗಳು ಹಾಗೂ ಶಾಲಾ ಆವರಣ ಸ್ವಚ್ಛತೆ ಇಲ್ಲದೆ ಅವರು ಮರುಗ ಬಾರದು. ಆದ್ದರಿಂದ ನಮ್ಮ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನ ಹಮ್ಮಿಕೊಂಡು ಶಾಲೆಯ ಆವರಣವನ್ನು ಸ್ವಚ್ಛತೆ ಮಾಡುವುದರೊಂದಿಗೆ ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬುವ ಕೆಲಸವು ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಈ ವೇಳೆ ಪ್ರೊ ವಿನಾಯಕ್ ಮಿರಜ್ಕಾರ್ ಎಂಎಂ ಲಷ್ಕರ್ ಹಾಗೂ ಬಿಎ ಮತ್ತು ಬಿಕಾಂ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

Edited By : Vijay Kumar
Kshetra Samachara

Kshetra Samachara

30/01/2021 11:13 am

Cinque Terre

7.32 K

Cinque Terre

0

ಸಂಬಂಧಿತ ಸುದ್ದಿ