ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಮಾಹಿತಿ ಹಕ್ಕು ಕಾಯ್ದೆ ಅರಿವು ಮತ್ತು ಸಂವಾದ ಕಾರ್ಯಕ್ರಮ

ಕುಂದಗೋಳ : ಪ್ರತಿಯೊಂದು ಗ್ರಾಮ ಪಂಚಾಯಿತಿಯಿಂದ ಹಿಡಿದು ರಾಜ್ಯ ರಾಷ್ಟ್ರಮಟ್ಟದ ಸರ್ಕಾರಿ ಇಲಾಖೆಯ ಮಾಹಿತಿ ಪಡೆಯಲು ಇಂದು ಮಾಹಿತಿ ಹಕ್ಕು ಕಾಯ್ದೆ ಉಪಯೋಗವಾಗುತ್ತಿದೆ

ಆ ಕಾಯ್ದೆಯನ್ನು ನಿಮ್ಮೂರು ಮತ್ತು ಗ್ರಾಮಗಳ ಸಾಮಾಜಿಕ ಏಳ್ಗೆ ಸಾರ್ವಜನಿಕ ಹಿತಾಸಕ್ತಿಗಳಿಗೆ ಬಳಸಿಕೊಳ್ಳಿ ಎಂದು ಮಾಹಿತಿ ರಾಜ್ಯ ಹಕ್ಕು ಕಾಯ್ದೆ ರಾಜ್ಯ ಸಂಪನ್ಮೂಲ ಸಂಯೋಜಕ ವಾಗೀಶ ಪಟ್ಟೇದ ಹೇಳಿದರು.

ಅವರು ಗುರವಿನಹಳ್ಳಿ ಬಸವೇಶ್ವರ ದೇವಸ್ಥಾನದಲ್ಲಿ ಗ್ರಾಮಸ್ಥರೇ ಆಯೋಜಿಸಿದ್ದ ಗ್ರಾಮ ಪಂಚಾಯಿತಿ ಸದಸ್ಯರ ಸನ್ಮಾನ ಸಮಾರಂಭ ಹಾಗೂ ಮಾಹಿತಿ ಹಕ್ಕು ಕಾಯ್ದೆ ರಾಜ್ಯ ಸಂಪನ್ಮೂಲ ವ್ಯಕ್ತಿಗಳ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸಣ್ಣ ಗ್ರಾಮದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಹೆಮ್ಮೆಯ ವಿಷಯ ಪ್ರತಿಯೊಬ್ಬರೂ ಮಾಹಿತಿ ಪಡೆಯಲು ಈ ಕಾಯ್ದೆ ಬಳಸಿಕೊಳ್ಳಬಹುದು ಎಂದು ಗ್ರಾಮಸ್ಥರಿಗೆ ಅರಿವು ಮೂಡಿಸಿದರು.

ಈ ವೇಳೆಯಲ್ಲಿ ನೂತನ ಗ್ರಾಮ ಪಂಚಾಯಿತಿಗೆ ಆಯ್ಕೆಯಾದ ಸರ್ವ ಸದಸ್ಯರು ಹಾಗೂ ಅಧ್ಯಕ್ಷ ಉಪಾಧ್ಯಕ್ಷರಿಗೆ ಸನ್ಮಾನ ಮಾಡಲಾಯಿತು. ಶಾಲಾ ಮಕ್ಕಳು ಸ್ವಾಗತ ಗೀತೆ ಹೇಳಿ ಕಾರ್ಯಕ್ರಮದ ಅತಿಥಿಗಳನ್ನು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಗುರುವಿನಹಳ್ಳಿ ಗ್ರಾಮದ ಗುರು ಹಿರಿಯರು ಸಾರ್ವಜನಿಕರು ಯುವಕರು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

06/02/2021 05:06 pm

Cinque Terre

15.12 K

Cinque Terre

1

ಸಂಬಂಧಿತ ಸುದ್ದಿ